Nov 1, 2020

ಜೋಗದ ಸಿರಿ ಬೆಳಕಿನಲ್ಲಿ(ನಿತ್ಯೋತ್ಸವ)

ಶೀರ್ಷಿಕೆ : ಜೋಗದ ಸಿರಿ ಬೆಳಕಿನಲ್ಲಿ(ನಿತ್ಯೋತ್ಸವ)
ಪ್ರಾಕಾರ : ಭಾವಗೀತೆ
ಭಾಷೆ : ಕನ್ನಡ


ಜೋಗದ ಸಿರಿ ಬೆಳಕಿನಲ್ಲಿ, ತುಂಗೆಯ ತೆನೆ ಬಳುಕಿನಲ್ಲಿ
ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ
ನಿತ್ಯಹರಿದ್ವರ್ಣವನದ ತೇಗ ಗಂಧ ತರುಗಳಲ್ಲಿ
ನಿತ್ಯೋತ್ಸವ ತಾಯಿ ನಿತ್ಯೋತ್ಸವ
ನಿನಗೆ ನಿತ್ಯೋತ್ಸವ ತಾಯಿ ನಿತ್ಯೋತ್ಸವ

ಇತಿಹಾಸದ ಹಿಮದಲ್ಲಿನ ಸಿಂಹಾಸನ ಮೂಲೆಯಲ್ಲಿ
ಗತ ಸಾಹಸ ಸಾರುತಿರುವ ಶಾಸನಗಳ ಸಾಲಿನಲ್ಲಿ
ಓಲೆಗರಿಯ ಸಿರಿಗಳಲ್ಲಿ, ದೇಗುಲಗಳ ಭಿತ್ತಿಗಳಲ್ಲಿ
ನಿತ್ಯೋತ್ಸವ ತಾಯಿ ನಿತ್ಯೋತ್ಸವ
ನಿನಗೆ ನಿತ್ಯೋತ್ಸವ ತಾಯಿ ನಿತ್ಯೋತ್ಸವ

ಹಲವೆನ್ನದ ಹಿರಿಮೆಯೆ, ಕುಲವೆನ್ನದ ಗರಿಮೆಯೆ
ಸದ್ವಿಕಾಸಶೀಲ ನುಡಿಯ ಲೋಕಾವೃತ ಸೀಮೆಯೆ
ಈ ವತ್ಸರ ನಿರ್ಮತ್ಸರ ಮನದುದಾರ ಮಹಿಮೆಯೆ
ನಿತ್ಯೋತ್ಸವ ತಾಯಿ ನಿತ್ಯೋತ್ಸವ
ನಿನಗೆ ನಿತ್ಯೋತ್ಸವ ತಾಯಿ ನಿತ್ಯೋತ್ಸವ.
@@@@@@@@@@@@@@

0 Comments: